ಬೋಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; 40 ದೋಣಿಗಳು ಭಸ್ಮ

Prasthutha|

ಆಂಧ್ರಪ್ರದೇಶ: ಫೈಬರ್ ಬೋಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 40 ದೋಣಿಗಳು ಸುಟ್ಟು ಕರಕಲಾಗಿರುವ ಘಟನೆ ಕಾಕಿನಾಡ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

- Advertisement -

ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ  ಆಗಮಿದಸಿದ  ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ ಸಹ ಕನಿಷ್ಠ 40 ಬೋಟ್‌ ಸುಟ್ಟು ಭಸ್ಮವಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.



Join Whatsapp