ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023| ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

Prasthutha|

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಲೋಕಸಭಾ ಚುನಾವಣೆ-2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹ ಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.


ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.

- Advertisement -


ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : [email protected] ಸಲ್ಲಿಸುವುದು. ಸಲ್ಲಿಕೆಗಳನ್ನು ದಿನಾಂಕ: 20-05-2023 ರಂದು ಶನಿವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.



Join Whatsapp