ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ನಿಧನ

Prasthutha|

ಮಹಾರಾಷ್ಟ್ರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮೊಮ್ಮಗ ಅರುಣ್ ಗಾಂಧಿ(89) ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ.

- Advertisement -


ಸಾಮಾಜಿಕ ಕಾರ್ಯಕರ್ತರಾಗಿದ್ದ ಅರುಣ್ ಗಾಂಧಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.


ಏಪ್ರಿಲ್ 14, 1934 ರಂದು ಡರ್ಬನ್ ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ಸಾಮಾಜಿಕ ಕಾರ್ಯಕರ್ತರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.



Join Whatsapp