ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಕಲ್ಲಡ್ಕದಲ್ಲಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಯಿತು.
ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ತುಂಬೆ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಎಸ್ ಡಿ ಪಿ ಐ ಗೋಳ್ತಮಜಲು ಗ್ರಾಮ ಸಮಿತಿ ಅಧ್ಯಕ್ಷ ಹಾಗೂ ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಕೆ ಸಿ ರೋಡ್, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರುಗಳಾದ ಹಾರಿಸ್ ಅಮರ್, ಯೂಸುಫ್ ಕಲ್ಲಡ್ಕ ಮತ್ತಿತರ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.