PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

Prasthutha|

ಬೆಂಗಳೂರು: ಪಿಎಫ್ ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆ ಸಿದ್ಧಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್ ಐ ಅನ್ನು ಏಕೆ ನಿಷೇಧಿಸಿರಲಿಲ್ಲ. ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್ ನೊಂದಿಗೆ ಮೈತ್ರಿ ಹೊಂದಿದೆ ಎಂದು ಹೇಳಿದರು.


ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಪಿಎಫ್ ಐ ಪ್ರಣಾಳಿಕೆಯಂತಿದೆ. ಕಾಂಗ್ರೆಸ್ ಪಕ್ಷ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂಪಡೆದು, ಆ ಸಂಘಟನೆಯ 1,700 ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು ಎಂದು ಅವರು ಟೀಕಿಸಿದರು.



Join Whatsapp