ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಮಂಗಳವಾರ ಚಿತ್ರದುರ್ಗ, ಹೊಸಪೇಟೆ ಮತ್ತು ಸಿಂಧನೂರಿನಲ್ಲಿ ಅಬ್ಬರಿಸಿದ್ದ ಪ್ರಧಾನಿ ಮೋದಿ ಕಲಬುರಗಿಯಲ್ಲಿ ರೋಡ್ ಶೋ ನಡೆಸಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಮಂಗಳೂರಿಗೆ ಆಗಮಿಸಿದ್ದು, ಮುಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಆಯೋಜಿಸಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಜಿಲ್ಲಾ ನಾಯಕರು ಹೂಗುಚ್ಛ ನೀಡಿ ಬರಮಾಡಿಕೊಂಡರು.