ವಿಟ್ಲ: ಕೆಲಿಂಜದ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ಅರಸೀಕೆರೆಯಲ್ಲಿ ನಡೆದಿದೆ.
ಕೆಲಿಂಜ ಪಾತ್ರತೋಟ ನಿವಾಸಿ ಶರೀಫ್ (34)ಮೃತಪಟ್ಟರು ಎಂದು ಗುರುತಿಸಲಾಗಿದೆ.
ಶರೀಫ್ ಕಳೆದ ಕೆಲ ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು.
ಶರೀಫ್ ಕುಟುಂಬಸ್ಥರ ಜೊತೆ ಜಾವಗಲ್ ದರ್ಗಾಕ್ಕೆ ತೆರಳಿದ್ದರು ಎನ್ನಲಾಗಿದೆ. ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ನಂತರ ಅವರನ್ನು ಅರಸೀಕೆರೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶರೀಫ್ ಅವರ ಧಪನ ಕಾರ್ಯ ಕೆಲಿಂಜ ಮಸೀದಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಶರೀಫ್ ಕೆಲಿಂಜ ಅವರು SKSSF ಹಾಗೂ ಸಮಸ್ತದ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಸಕ್ರಿಯ ಕಾರ್ಯಕರ್ತರಾಗಿದ್ದರು.