ಮುಂಬಯಿ: ಪಾಕಿಸ್ತಾನಿ ಏಜೆಂಟ್ ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಓ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖತರ್ನಾಕ್ ವಿಜ್ಞಾನಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸಿದ್ದಾರೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿಯು ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್ ನೊಂದಿಗೆ ಸಂಪರ್ಕದಲ್ಲಿದ್ದ ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನು ಉಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿಯ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.