ಬಂಟ್ವಾಳ: ಬಿಜೆಪಿ ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

Prasthutha|

ಬಂಟ್ವಾಳ: ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ತೆರಳಿ ಮತಯಾಚನೆ ಮಾಡುತ್ತಿದ್ದ ಸಂದರ್ಭ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.

- Advertisement -


ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.


ಪ್ರವೀಣ್ ಅವರು ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಬಿಜೆಪಿಯ ಕಾರ್ಯಕರ್ತನಾಗಿದ್ದರು.

- Advertisement -


ಪ್ರವೀಣ್ ಶುಕ್ರವಾರ ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಸಂಭವಿಸಿ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp