ಕನ್ನಡ – ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಅಸಹ್ಯ: ಮೋಹನ್ ದಾಸರಿ 

Prasthutha|

ಬೆಂಗಳೂರು: ಕನ್ನಡ – ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಅಸಹ್ಯ ಎಂದು ನಗರ ವಿಧಾನಸಭಾ ಕ್ಷೇತ್ರದ  ಅಭ್ಯರ್ಥಿ ಮೋಹನ್ ದಾಸರಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ತಮಿಳು ಭಾಷೆಗಳು ಹೆಚ್ಚಾಗಿ ಇರುವ ಪ್ರದೇಶಗಳ  ಹೋದ ಕಡೆಯಲ್ಲೆಲ್ಲ  ನಾನು ತಮಿಳಿಗ ನನಗೆ ವೋಟನ್ನು ನೀಡಿ, ತಮಿಳಿಗರು ಯಾರು ವಿಧಾನಸಭೆಯನ್ನು ಪ್ರವೇಶಿಸಿಲ್ಲ, ನನ್ನನ್ನು ಗೆಲ್ಲಿಸಿ ಎಂದು ಊಟ ಕೇಳುತ್ತಿರುವುದು ಅಸಾಂವಿಧಾನಿಕ ಹಾಗೂ ಭಾಷಾ ಭಾತೃತ್ವಕ್ಕೆ ಧಕ್ಕೆ ಉಂಟು ಮಾಡುವಂತಹ ಕಾರ್ಯ ಎಂದು ಆರೋಪಿಸಿದರು.

ಆನಂದ್ ಕುಮಾರ್ ಅವರಿಗೆ ತಾಕತ್ತಿದ್ದರೆ ತಾವು ಇದುವರೆಗೂ ಮರ್ಫಿ ಟೌನ್ ವಾರ್ಡ್ನಲ್ಲಿ ಮಾಡಿರುವಂತಹ ಸ್ಕೂಲು, ಆಸ್ಪತ್ರೆಗಳು,ರಸ್ತೆಗಳು ಒಳಚರಂಡಿಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಈ ರೀತಿಯ ಕ್ಷುಲ್ಲಕ ಭಾಷಾ ರಾಜಕಾರಣಕ್ಕೆ ಇಳಿದಿರುವುದು ಅವರು  ಖಂಡಿತ ಸೋಲುತ್ತಾರೆಂಬ ಭೀತಿಯ ಹೊರತು ಮತ್ತೇನಲ್ಲ’ ಎಂದು ಮೋಹನ್ ದಾಸರು ಹೇಳಿದರು.

- Advertisement -

ಸರ್ ಸಿ ವಿ ರಾಮನ್ ನಗರ ಕ್ಷೇತ್ರ ಸರ್ವ ಭಾಷೆಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ. ಕಾವೇರಿ ಗಲಾಟೆಯನ್ನು ಸೇರಿಸಿದಂತೆ ಯಾವುದೇ ರೀತಿಯ ತಮಿಳು ಮತ್ತು  ಕನ್ನಡಿಗರ ಭಾತೃತ್ವಕ್ಕೆ ಧಕ್ಕೆಯಾಗದಂತೆ ಯಾವುದೇ ರೀತಿಯ ಸಣ್ಣ ಗಲಭೆಗಳು ಸಹ ಈ ಕ್ಷೇತ್ರದಲ್ಲಿ ಆಗಿಲ್ಲ.  ಹೀಗಿರುವಾಗ ಆನಂದ್ ಕುಮಾರ್ ಅವರ ತಮಿಳು  ಭಾಷಾ ಪ್ರಚಾರ  ವೈಖರಿ ನಿಜಕ್ಕೂ ಅಸಹ್ಯ ತರಿಸುವಂತಿದೆ ಎಂದು ಮೋಹನ್ ದಾಸರ ಸುದ್ದಿಗಾರರೊಂದಿಗೆ ತಮ್ಮ ಅಳಲನ್ನು ವ್ಯಕ್ತಪಡಿಸಿದರು.



Join Whatsapp