ರಾಜ್ಯದಲ್ಲಿ ಮೇ 9 ರಿಂದ ಎರಡು ದಿನ KSRTC ಸಂಚಾರ ವ್ಯತ್ಯಯ

Prasthutha|

ಬೆಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಹೆಚ್ಚಿನ ಬಸ್‌ ಗಳನ್ನು ನಿಯೋಜನೆ ಮಾಡಿರುವುದರಿಂದ ಮೇ 9 ರಿಂದ ಎರಡು ದಿನಗಳ ಕಾಲ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

- Advertisement -

ಇದರಿಂದ ಪ್ರಯಾಣಿಕರು ಸಹಕರಿಸಲು ಮತ್ತು ಅದಕ್ಕನುಗುಣವಾಗಿ ಜನರು ಪ್ರಯಾಣವನ್ನು ಯೋಜಿಸಲು ಮನವಿ ಮಾಡಿ ಕೆಎಸ್‌ಆರ್‌ಟಿಸಿ ನಿಗಮ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನಿಗಮದಲ್ಲಿ ಒಟ್ಟು 8,100 ಕೆಎಸ್​ಆರ್​ಟಿಸಿ ಬಸ್​ಗಳಿದ್ದು, ಈ ಪೈಕಿ 3,700 ಬಸ್​​ಗಳು ಚುನಾವಣಾ ಕೆಲಸಕ್ಕೆ ಮೀಸಲಿವೆ. ಮೇ 9 ಮತ್ತು 10 ರಂದು 4,400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

- Advertisement -

ಮತಗಟ್ಟೆ ಸಿಬ್ಬಂದಿ ಕೆಲಸಕ್ಕೆ, ಮತಗಟ್ಟೆ ಕೇಂದ್ರಗಳಿಗೆ ಬೇಕಾದ ವಸ್ತುಗಳನ್ನು ಸಾಗಿಸಲು ಇತರೆ ಚುನಾವಣಾ ಚಟುವಟಿಕೆಗೆ ಸಂಬಂಧಿಸಿದಂತೆ ವಾಹನಗಳನ್ನು ಬಳಸಲಾಗುತ್ತದೆ. ಪ್ರಸುತ್ತ ಪೆಟ್ರೋಲ್, ಡೀಸೆಲ್, ಭತ್ಯೆ, ಕೂಲಿ, ವಾಹನದ ಬಿಡಿ ಭಾಗಗಳ ಬೆಲೆಗಳನ್ನು ಪರಿಗಣಿಸಿ ದರ ನಿಗದಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ  ಹಾಗೂ ಖಾಸಗಿ ಬಸ್‌ಗಳಿಗೆ ಪ್ರತಿ ಕಿ.ಮೀ.ಗೆ 57.50 ರೂ ಬಾಡಿಗೆ ದರಗಳನ್ನು ನಿಗದಿಪಡಿಸಲಾಗಿದೆ. ಒಂದು ದಿನಕ್ಕೆ 11,500 ರೂಪಾಯಿಯನ್ನು ಮುಂಗಡವಾಗಿ ನೀಡಬೇಕು. ಎರಡು ಗಂಟೆಗೂ ಹೆಚ್ಚು ಸಮಯವಾದರೆ ಒಂದು ದಿನದ ಲೆಕ್ಕದಲ್ಲಿ ಬಾಡಿಗೆ ನೀಡಬೇಕು.

ಬೆಂಗಳೂರು ವ್ಯಾಪ್ತಿಯ ಖಾಸಗಿ ವಾಹನಗಳಿಗೆ 35+1 ಸೀಟ್ ಸಾಮರ್ಥ್ಯ ಹೊಂದಿರುವಂತಹ ವಾಹನಗಳಿಗೆ ಪ್ರತಿ ಕಿಲೋ ಮೀಟರ್‌ಗೆ 43.50 ರೂ ಹಾಗೂ ಒಂದು ದಿನಕ್ಕೆ 8,700 ರೂ ಬಾಡಿಗೆ ದರವನ್ನು ನಿಗದಿ ಮಾಡಲಾಗಿದೆ. ಬಾಡಿಗೆ ಪಡೆದು ಬಳಕೆ ಮಾಡದ ವಾಹನಗಳಿಗೆ 4,350 ರೂ ಇದೆ.



Join Whatsapp