ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ರಾಮನಾಥನ್, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಅವರು ಪ್ರಕಟಿಸಿದ್ದಾರೆ.
ಶೇ.83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾವಾರು ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.
2022- 2023ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.