ಬೆಂಗಳೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕರ್ನಾಟಕ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಪಕ್ಷದ ವಿರುದ್ಧ ದಿನಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ ದೂರಿನ ಅನ್ವಯ ನೋಟಿಸ್ ಜಾರಿ ಮಾಡಲಾಗಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ವಿವರಣೆ ನೀಡುವಂತೆ ತಾಕೀತು ಮಾಡಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿ ದಾಖಲೆ ನೀಡುವಂತೆ ತಾಕೀತು ಮಾಡಿತ್ತು. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಸೂಚಿಸಿತ್ತು. ಅದರಂತೆ ನಿನ್ನೆ ಅಧಿಕಾರಿಗಳ ಮುಂದೆ ಡಿಕೆಶಿ ಹಾಜರಾಗಿದ್ದರು.