ಬೆಂಗಳೂರು: ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮತ ಚಲಾಯಿಸಿದರು.
ಇವರ ಜೊತೆಗೆ ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಧರ್ಮಪತ್ನಿ ರೇವತಿ ಇದೇ ಸಂದರ್ಭದಲ್ಲಿ ಮತದಾನ ಮಾಡಿದರು.