ಮಂಗಳೂರ: ಬುಧವಾರ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ 5 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಕಾವೂರು, ಸುರತ್ಕಲ್, ಬಜಪೆ, ಮೂಡುಬಿದಿರೆ , ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14 ರ ಬೆಳಗ್ಗೆ 6ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಆದೇಶ ಹೊರಡಿಸಿದ್ದಾರೆ.