ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 55678 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ತನ್ನ ಆಪ್ತನ ವಿರುದ್ಧವೇ ಸೋಲನ್ನು ಅನುಭವಿಸುವ ಮೂಲಕ ಬಿಜೆಪಿ ನಾಯಕ ತೀವ್ರ ಮುಖಭಂಗವನ್ನು ಅನುಭವಿಸಿದ್ದಾರೆ.
1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿ ಈ ಬಾರಿ ತಮ್ಮ ಆಪ್ತನ ಮುಂದೇಯೇ ಸೋಲು ಕಂಡಿದ್ದಾರೆ.
1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದರು. ಆದರೆ ಈ ಬಾರಿ ಹೆಚ್.ಡಿ ತಮ್ಮಯ್ಯ ಎದುರು ಏಳು ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಸೇರಿರುವ ತಮ್ಮಯ್ಯ ಬಿಜೆಪಿಯಲ್ಲಿದ್ದರು. ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರಿಗೆ ವಿರೋಧದ ನಡುವೆಯೂ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.