ಹಿಜಾಬ್ ನಿಷೇಧ ಹಿಂಪಡೆಯುತ್ತೇವೆ: ಮುಸ್ಲಿಮ್ ಶಾಸಕಿ ಕನೀಜ್ ಫಾತಿಮಾ

Prasthutha|

ಕಲಬುರಗಿ: ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ನಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ಶಾಸಕಿ ಕನೀಜ್ ಫಾತಿಮಾ ಅವರು ಹೇಳಿದ್ದಾರೆ.

- Advertisement -


ಕಲಬುರಗಿ ಉತ್ತರದ ಹಾಲಿ ಕಾಂಗ್ರೆಸ್ ಶಾಸಕಿಯಾಗಿದ್ದ ಫಾತಿಮಾ ಅವರು, ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.


ನಾವು ಮುಂಬರುವ ದಿನಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುತ್ತೇವೆ ಮತ್ತು ನಾವು ಆ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಪ್ರವೇಶ ನೀಡುತ್ತೇವೆ. ಅವರು ತಮ್ಮ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ. ಅವರು ಅಮೂಲ್ಯವಾದ ಎರಡು ವರ್ಷಗಳ ಸಮಯವನ್ನು ಕಳೆದುಕೊಂಡಿದ್ದಾರೆ ಎಂದು ಫಾತಿಮಾ ಅವರು ಸ್ಕ್ರೋಲ್ ಗೆ ತಿಳಿಸಿದ್ದಾರೆ.



Join Whatsapp