ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ.
ಇನ್ನು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಶನಿವಾರ ಮಧ್ಯಾಹ್ನ 2.30ಕ್ಕೆ ನೂತನ ಸಿಎಂ ಪ್ರಮಾಣ ವಚನ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಳಗ್ಗೆ 10 ಗಂಟೆ ಸುದ್ದಿಗೋಷ್ಠಿ ಕರೆದಿದ್ದಾರೆ. ಇನ್ನು ಈ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ CLP ನಾಯಕನ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು(ಮೇ 18) ಸಂಜೆ 7ಗಂಟೆಗೆ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ಕರೆದಿದ್ದಾರೆ. ಈ ಸಭೆಗೆ ನೂತನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರನ್ನು ಆಹ್ವಾನಿಸಲಾಗಿದ್ದು, ಎಲ್ಲರ ಸಮ್ಮುಖದಲ್ಲೇ ಅಧಿಕೃತವಾಗಿ CLP ನಾಯಕನ ಘೋಷಣೆಯಾಗಲಿದೆ.
ಇದರ ನಡುನೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭಕ್ಕೆ ಭರದ ಸಿದ್ಧತೆ ಆರಂಭವಾಗಿದೆ.