ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ ಎಡಿಜಿಪಿ ಅಲೋಕ್ ಕುಮಾರ್

Prasthutha|

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರದ ಬ್ಯಾನರ್ ನಲ್ಲಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿ ಅಮಾನುಷವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಪುತ್ತೂರು ಘಟನೆ ಸಂಬಂಧ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂತಹ ಕಾನೂನುಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅಲೋಕ್ ಕುಮಾರ್ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಘಟನೆ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಆರೋಪಿಗಳ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಶ್ರೀನಾಥ್ ರೆಡ್ಡಿ ಮತ್ತು ಅದೇ ಠಾಣೆಯ ಪೊಲೀಸ್ ಪೇದೆ ಹರ್ಷಿತ್ನನ್ನು ಅಮಾನತುಗೊಳಿಸಲಾಗಿದೆ.



Join Whatsapp