ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ JDS ಬೆಂಬಲ: ಹೆಚ್.ಡಿ.ಕುಮಾರಸ್ವಾಮಿ

Prasthutha|

ಬೆಂಗಳೂರು: ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ JDS ಬೆಂಬಲ ನೀಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ ಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ.



Join Whatsapp