ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಅವರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.
ಸದ್ಯ ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, 2025ರ ಎಪ್ರಿಲ್‍ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಸರಕಾರವು ಡಾ. ಅಲೋಕ್ ಮೋಹನ್ ಅವರನ್ನು ಡಿಜಿ-ಐಜಿ ಹುದ್ದೆಗೆ ಸೇವಾ ಜೇಷ್ಠತೆ ಆಧಾರದಲ್ಲಿ ಪರಿಗಣಿಸಿದೆ ಎಂದು ಹೇಳಲಾಗುತ್ತಿದೆ.
ಇನ್ನೂ, ಈ ಹುದ್ದೆಯ ಸ್ಪರ್ಧೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಾದ ರವೀಂದ್ರನಾಥ್, ಕಮಲ್‍ಪಂತ್, ಪ್ರತಾಪ್‍ರೆಡ್ಡಿ ಅವರ ಹೆಸರು ಕೇಳಿಬಂದಿತ್ತು.