ಮಾಜಿ ಶಾಸಕ ಯು.ಆರ್.ಸಭಾಪತಿ ನಿಧನ

Prasthutha|

- Advertisement -

ಉಡುಪಿ: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್.ಸಭಾಪತಿ(71) ಅಲ್ಪಕಾಲದ ಅಸೌಖ್ಯದಿಂದ ಬಡಗುಪೇಟೆಯ ತಮ್ಮ ಮನೆಯಲ್ಲಿ ಇಂದು ನಿಧನರಾಗಿದ್ದಾರೆ.

1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು.
ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿ ಕೊಂಡಿದ್ದರು.

- Advertisement -

ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳನ್ನು ಆಗಲಿದ್ದಾರೆ.



Join Whatsapp