ರಾಜ್ಯ ಸರ್ಕಾರದ ವಿರುದ್ಧ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ಅಮಾನತು

Prasthutha|

- Advertisement -

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.

- Advertisement -

ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.



Join Whatsapp