ಬೆಂಗಳೂರಿನಲ್ಲಿ ಏಕಾಏಕಿ ಗಾಳಿ, ಕೆಲವೆಡೆ ಆಲಿಕಲ್ಲು ಮಳೆ

Prasthutha|

ಬೆಂಗಳೂರು: ಬೆಂಗಳೂರಿನ ಹಲವೆಡೆ ಕಗ್ಗತ್ತಲ ಮೋಡ ಆವರಿಸಿದ ಕ್ಷಣಾರ್ಧದಲ್ಲೇ ಗಾಳಿ ಮಳೆ ಆರಂಭವಾಗಿದೆ. ಇನ್ನು ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

- Advertisement -

ಏಕಾಏಕಿಯಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿದರು.

ನಗರದ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರಂ, ನಾಗರಬಾವಿ, ಕಾಮಾಕ್ಷಿಪಾಳ್ಯ, ಗಿರಿನಗರ, ಜಯನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಜೆ.ಪಿ.ನಗರ, ನಂದಿನಿ ಲೇಔಟ್, ರಾಜಾಜಿನಗರ ಸುತ್ತಮುತ್ತ ಮಳೆಯಾಗಿದೆ.



Join Whatsapp