ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು  ಮಂಗಳೂರು ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಹೈಕಮಾಂಡ್ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿದ್ದು, ಮನವಿಗೆ ಮಂಗಳೂರು ಶಾಸಕ ಒಪ್ಪಿಗೆ ಸೂಚಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು  ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.



Join Whatsapp