ಪ್ರಧಾನ ಮಂತ್ರಿ RSS ಸ್ವಯಂ ಸೇವಕ, ನಿಷೇಧಕ್ಕೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ: ನಳಿನ್

Prasthutha|

ಮಂಗಳೂರು: ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದರು.


ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದು ಪ್ರಶ್ನಿಸಿದ್ದಾರೆ.



Join Whatsapp