ಮೈಸೂರು ; ಸಾಲಭಾದೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಶ್ಯಾನಭೋಗನಹಳ್ಳಿಯ ಸುರೇಶ್(58) ಎಂಬಾತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಎಕರೆ ಜಮೀನು ಹೊಂದಿದ್ದ ರೈತ ಸುರೇಶ್, ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ರೂಪಾಯಿ ಸಾಲ ಮಾಡಿದ್ದನು.
ಇನ್ನೇನು ಬೆಳೆ ಬಂದ ಕೂಡಲೇ ಎಲ್ಲವನ್ನ ಹಿಂದಿರುಗಿಸುವ ಉತ್ಸಾಹದಲ್ಲಿದ್ದ ರೈತನಿಗೆ ಬೆಳೆ ಕೈ ಕೊಟ್ಟ ಹಿನ್ನೆಲೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದಲ್ಲದೇ ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಎಂಬಾತ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ, ತಂಬಾಕು ರಾಗಿ ಬೆಳೆ ಬೆಳೆದಿದ್ದರು.
ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಬಡ್ಡಿ ಹೆಚ್ಚಾಗಿತ್ತು. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.