ಬಿಜೆಪಿ ಕಾರ್ಯಕ್ರಮದ ಬ್ಯಾನರ್’ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೊ: ಸಾಮಾಜಿಕ ಜಾಲತಾಣದಲ್ಲಿ ವೈರಲ್

Prasthutha|

ಶಿವಮೊಗ್ಗ: ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬ್ಯಾನರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೊ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -


ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಚೇರಿ ಉದ್ಘಾಟಿಸಿದರು. ವೇದಿಕೆ ಕಾರ್ಯಕ್ರಮಕ್ಕಾಗಿ ಬ್ಯಾನರ್ ಅಳವಡಿಸಿದ್ದು ಅದರಲ್ಲಿ ಬಿಜೆಪಿ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯನವರ ಫೋಟೊ ಕೂಡಾ ಹಾಕಲಾಗಿದೆ.


ಬ್ಯಾನರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಜೊತೆಗೆ ಮೇಯರ್ ಫೋಟೋಗಳನ್ನು ಗಮನಿಸಬಹುದು.
ಬಿಜೆಪಿ ಕಾರ್ಯಕ್ರಮದ ಬ್ಯಾನರ್ನಲ್ಲಿ ಸಿದ್ದರಾಮಯ್ಯನವರ ಫೋಟೊ ಬಳಕೆ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.



Join Whatsapp