ಬಸ್-ಕಾರು ನಡುವೆ ಅಪಘಾತ: ನಾಲ್ವರು ಮೃತ್ಯು

Prasthutha|

ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಸಂಭವಿಸಿ ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.

- Advertisement -


ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.


ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp