ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಹಾಸನ ವಿಮೆನ್ ಇಂಡಿಯಾ ಮೂವ್ಮೆಂಟ್’ನಿಂದ ಪ್ರತಿಭಟನೆ

Prasthutha|

ಹಾಸನ: ಕುಸ್ತಿಪಟುಗಳ ಮೇಲೆ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್ ನಲ್ಲಿ ಕುಸ್ತಿ ಪಟು ಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಶನಿವಾರ ಹಾಸನ ವಿಮೆನ್ ಇಂಡಿಯಾ ಮೂವ್ಮೆಂಟ್ ಹಾಸನ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

- Advertisement -

ಕಳೆದ ಮೂರು ತಿಂಗಳಿನಿಂದ ದೆಹಲಿಯ ಜಂತ‌ ಮಂತರ್ ನಲ್ಲಿ ಕುಸ್ತಿಪಟುಗಳು ಪ್ರತಿಭಟನೆಯನ್ನು ನಡೆಸುತ್ತಿದ್ದು ಆರೋಪಿ, ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸಹ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಈ ದೇಶಕ್ಕೆ ಕೀರ್ತಿಯನ್ನು ತಂದಂತಹ ಹೆಮ್ಮೆಯ ಮಹಿಳಾ ಕುಸ್ತಿಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅರೋಪಿಯನ್ನು ಬಂಧಿಸಲು ಕೇಂದ್ರ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.



Join Whatsapp