ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಇಂಧನ ಇಲಾಖೆ ಸಚಿವ ಕೆಜೆ ಜಾರ್ಜ್‌ ಇಂದು ಸುದ್ದಿಗೋಷ್ಠಿ

Prasthutha|

ಬೆಂಗಳೂರು: ಚುನಾವಣೆ ಪೂರ್ವ ಘೋಷಣೆ ಮಾಡಿದ್ದ 5 ಗ್ಯಾರೆಂಟಿಗಳನ್ನು ಕಾಂಗ್ರೆಸ್ ಅಧಿಕಾರಿಕ್ಕೆ ಬಂದ ಮೇಲೆ ಜಾರಿ ಮಾಡಿದೆ. ಕಾಂಗ್ರೆಸ್ ಘೋಷಿಸಿದ ಐದು ಮಹತ್ವದ ಗ್ಯಾರೆಂಟಿಗಳಲ್ಲಿ ಉಚಿತ ವಿದ್ಯುತ್ ಯೋಜನೆ ಕೂಡ ಒಂದು. ಈ ಕುರಿತು ಇಂದು(ಬುಧವಾರ) ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಬೆಳಿಗ್ಗೆ 11.45ಕ್ಕೆ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಸುದ್ದಿಗೋಷ್ಠಿ ಕರೆದಿದ್ದು, ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ.

- Advertisement -

ಒಂದು ಆರ್​ಆರ್ ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್

- Advertisement -

ಒಂದು ಆರ್​ಆರ್ ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್​ ಎಂದು ಹೇಳುವ ಮೂಲಕ ಸಚಿವ ಕೆಜೆ ಜಾರ್ಜ್ ಅವರು ಸರ್ಕಾರದ ನಿಲುವನ್ನು ಪುನರುಚ್ಚರಿಸಿದ್ದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ಬೆಸ್ಕಾಂ ಅಧಿಕಾರಿಗಳೊಂದಿಗಿನ ಸಭೆಯ ನಂತರ ಮಾತನಾಡಿದ ಅವರು, ಬಾಡಿಗೆದಾರರು ಮತ್ತು ಮಾಲೀಕರು ಅಂತ ನಾವು ವ್ಯತ್ಯಾಸ ಮಾಡುತ್ತಿಲ್ಲ. ಸ್ಥಾವರ ಎಂಬುದರ ಅರ್ಥ ಒಂದು ಆರ್​ಆರ್ ನಂಬರ್. ಯಾರು ಎಷ್ಟೇ ಆರ್​ಆರ್ ನಂಬರ್ ಹೊಂದಿರಲಿ, ಆದರೆ ಒಂದು ಆರ್​ಆರ್ ನಂಬರ್​​ಗೆ ಮಾತ್ರ ಯೋಜನೆ ಅಡಿಯಲ್ಲಿ ಬರುತ್ತದೆ ಎಂದು ಸ್ಪಷ್ಟನೆ ನೀಡಿದ್ದರು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ದಾಖಲೆ ಇರಬೇಕು. ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದಾರೆಂಬ ದಾಖಲೆ ಬೇಕು. ವಿದ್ಯುತ್​ ಬಿಲ್, ಮನೆ ಬಾಡಿಗೆ ಕರಾರುಪತ್ರ ಇರಬೇಕು. ಮನೆ ಮಾಲೀಕ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿರಬೇಕು. ಎಷ್ಟು ಬಾಡಿಗೆ ಮನೆಗಳಿವೆ ಎಂದು ಮಾಲೀಕ ಘೋಷಿಸಿರುವ ದಾಖಲೆಗಳಿರಬೇಕು ಎಂದು ತಿಳಿಸಿದ್ದಾರೆ.

ಬಾಡಿಗೆದಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಾಡಿಗೆದಾರರು ಕಳ್ಳಾಟ ಮಾಡಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.



Join Whatsapp