►‘ಬಾಡಿಗೆ ಭಾಷಣಕಾರರನ್ನೆಲ್ಲ ಬಿಜೆಪಿಯವರು ಲೇಖಕರು, ಸಾಹಿತಿಗಳು ಮಾಡಿದ್ದಾರೆ’
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ತೆಗೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ? ಅವರು ಪಿಹೆಚ್ ಡಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು.
ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದೋರುವವರು ಇವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಕಿಡಿಕಾರಿದರು.