ಮೈಸೂರು: ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರೆಂಟಿಗಳಲ್ಲಿ ಒಂದಾದ “ಅನ್ನಭಾಗ್ಯ” ಯೋಜನೆ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ನಂಜನಗೂಡು ತಾಲೂಕಿನ ಸುತ್ತೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅನ್ನಭಾಗ್ಯ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ ನೀಡುತ್ತೇವೆ. ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುತ್ತೇವೆ. ನಾಳೆ (ಜೂ.11) ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ನಾಳೆಯಿಂದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದು ಹೇಳಿದರು.