ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್

Prasthutha|

- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಚರಂಡಿಗೆ ಉರುಳಿದ ಘಟನೆ ರಾ.ಹೆ.75 ರ ತುಂಬೆಯಲ್ಲಿ ನಡೆದಿದೆ.

ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದೆ.

- Advertisement -

ಬಸ್ ಚರಂಡಿಗೆ ಉರುಳಿದ ಪರಿಣಾಮ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಬೇರೆ ವಾಹನಗಳಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.

ಇನ್ನು ಮಳೆಯ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಮಣ್ಣು ಸಡಿಲಗೊಂಡಿದ್ದು, ಚಕ್ರಗಳು ಜಾರಿ ಚರಂಡಿಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.




Join Whatsapp