40% ಆರೋಪದ ಬಗ್ಗೆ ತನಿಖೆ ಮಾಡಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Prasthutha|

ರಾಮನಗರ: 40% ಆರೋಪದ ಬಗ್ಗೆ ತನಿಖೆ ಮಾಡಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

- Advertisement -

ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ:

ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆದ ನಂತರ ಚನ್ನಪಟ್ಟಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕುಮಾರಸ್ವಾಮಿ ಅವರು ಭಾಗಿಯಾದರು.

ಇಲಾಖಾವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು ಹಾಗೂ ಕಾಡಾನೆ ತಡೆಯಲು ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು.

ಕೆಡಿಪಿ ಸಭೆಗೂ ಮುನ್ನ ಅವಾರು ಶಾಸಕರ ಕಚೇರಿ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ಹೆಚ್‌ಡಿಕೆ ಅವರನ್ನು ಸನ್ಮಾನಿಸಿದರು.



Join Whatsapp