ಅಲೆಮಾರಿಗಳ ಪ್ರತ್ಯೇಕ ಆಯೋಗ ಕುರಿತು ಸಿಎಂ ಗೆ ಮನವಿ: ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Prasthutha|

- Advertisement -

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ:ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು.

ಈ ಸಂದರ್ಭದಲ್ಲಿ ಎಲ್ಲಾ ಅಲೆಮಾರಿ ಸಮುದಾಯಗಳ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗ ಸ್ಥಾಪಿಸುವ ಕುರಿತು ಪರಿಶೀಲಿಸಲಾಗುವುದು ಎಂದರು.

- Advertisement -

ಇಂದಿಗೂ ಹಾವಾಡಿಸುವ ಮೂಲಕ ಜೀವನ ನಡೆಸುವ ಹಾವಾಡಿಗ ಸಮುದಾಯದವರಿಗೆ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಕಿವಿ ಮಾತು ಹೇಳಿದರು. ಸರ್ಕಾರ ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ದೊರೆಯಲಿದೆ. ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ನಿಯೋಗದ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ನಿಯೋಗದಲ್ಲಿ ಸುಡುಗಾಡು ಸಿದ್ಧರು, ದೊಂಬಿದಾಸ, ದಕ್ಕಲಿಗ, ಹಂದಿಜೋಗಿ, ಕೊಲೆಬಸವ, ಹಕ್ಕಿಪಿಕ್ಕಿ, ಕರಡಿ ಕಲಂಧರ್, ಪಿಂಜಾರ/ ನದಾಫ್, ಸೋಲಿಗ, ಜೇನು ಕುರುಬ, ಗ್ಯಾರೆ, ಕೊರವ, ಬೇಡ ಗಂಪಣ, ಗೆಜ್ಜೆಗಾರ, ಬುಡ್ಗ ಜಂಗಮ, ಕಾಡುಗೊಲ್ಲ, ಹಲಾಲ್ ಖೋರ್ ಸಮುದಾಯಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.



Join Whatsapp