ಬಿಪೊರ್ ಜಾಯ್ ಚಂಡಮಾರುತ: 21,000 ಮಂದಿಯ ಸ್ಥಳಾಂತರ

Prasthutha|

ಅಹಮದಾಬಾದ್: ಗುಜರಾತ್ ನ ಕಛ್ ಜಿಲ್ಲೆಯ ಜಖೌ ಬಂದರು ಪ್ರದೇಶದ ಬಳಿ ಬಿಪೊರ್ ಜಾಯ್ ಚಂಡಮಾರುತ ಗುರುವಾರ ಸಂಜೆಯ ವೇಳೆಗೆ ಅಪ್ಪಳಿಸುವ ಸಾಧ್ಯೆತೆಯಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ 21,000 ಮಂದಿಗೆ ತಾತ್ಕಾಲಿಕ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

- Advertisement -


ಚಂಡಮಾರುತ ಅಪ್ಪಳಿಸಲು ಸಾಧ್ಯತೆಯಿರುವ ಕರಾವಳಿ ಭಾಗದಲ್ಲಿ 10 ಕಿ.ಮೀ. ವ್ಯಾಪಿಯಲ್ಲಿ ಜನರನ್ನು ಸುರಕ್ಷಿತ ಕೇಂದ್ರಗಳಿಗೆ ಸ್ಥಳಾಂತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ವಿವಿಧ ಇಲಾಖೆಯ ಅಧಿಕಾರಿಗಳಿಂದ ಜನರನ್ನು ಸುರಕ್ಷಿತ ಕೇಂದ್ರಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಈಗಲೂ ಮುಂದುವರಿದಿದ್ದು, ಬುಧವಾರ ಸಂಜೆಯ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




Join Whatsapp