ಬಿಜೆಪಿಯ ಉರಿ ಶಮನಕ್ಕೆ ಬರ್ನಲ್ ಭಾಗ್ಯ: ಕಾಂಗ್ರೆಸ್

Prasthutha|

ಬೆಂಗಳೂರು: ಬಿಜೆಪಿಯ ಉರಿ ಶಮನಕ್ಕಾಗಿ ಬರ್ನಲ್ ಭಾಗ್ಯ ಕೊಡುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -


ಬಸ್ ನಿಂದ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದ್ದು,ಯಾವುದೇ ಪೂರ್ವಸಿದ್ಧತೆ ಇಲ್ಲದೆ ಜಾರಿ ಮಾಡಿದ ಘೋಷಣೆಯ ಪರಿಣಾಮವೇ ಇದು. ಈ ದುರಂತಕ್ಕೆ ಯಾರು ಹೊಣೆ. ರಾಮಲಿಂಗಾರೆಡ್ಡಿಯವರೇ ಉತ್ತರಿಸಿ ಎಂದು ಹೇಳಿತ್ತು. ಬಿಜೆಪಿ ಮಾಡಿದ್ದ ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದ್ದು, ‘ಬಿಜೆಪಿ ಪಕ್ಷದ ಉರಿ, ನೋವು ನಮಗೆ ಅರ್ಥವಾಗುತ್ತದೆ. ಬಿಜೆಪಿಯ ಉರಿ ಶಮನಕ್ಕಾಗಿ “ಬರ್ನಲ್ ಭಾಗ್ಯ” ಕೊಡುವ ಬಗ್ಗೆ ಚಿಂತಿಸುತ್ತೇವೆ. ಪೂರ್ವಸಿದ್ಧತೆ ಇಲ್ಲದೆ ಲಾಕ್ ಡೌನ್ ಮಾಡಿ, ನೋಟು ನಿಷೇಧ ಮಾಡಿ ಸತ್ತ ನೂರಾರು ಮಂದಿಯ ಬಗ್ಗೆ ಈ ಕಾಳಜಿ ಇರಲಿಲ್ಲವೇಕೆ? ಹೆಚ್ಚುವರಿ ಬಸ್ ಗಳನ್ನು ಖರೀದಿಸಲು ಚಿಂತಿಸುತ್ತಿದ್ದೇವೆ, ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹುನ್ನಾರ ನಡೆಸಿದ ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ‘ ಎಂದು ಹೇಳಿದೆ.




Join Whatsapp