2ನೇ ದಿನ ಉಚಿತವಾಗಿ ಪ್ರಯಾಣಿಸಿದ 41.34 ಲಕ್ಷ ಮಹಿಳೆಯರು: 8.83 ಕೋಟಿ ವೆಚ್ಚ

Prasthutha|

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆ ಜಾರಿಯಾಗಿ ಇಂದಿಗೆ ಎರಡು ದಿನ ಕಳೆದಿದೆ. ಮೊದಲ ದಿನ ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ಸೋಮವಾರ ಮಧ್ಯಾಹ್ನ 12 ಗಂಟೆವರೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಗಳಲ್ಲಿ ಒಟ್ಟು 5,71,023 ಮಂದಿ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೆಚ್ಚ ₹1.40 ಕೋಟಿ ರಷ್ಟಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

- Advertisement -


ಎರಡನೇ ದಿನ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೆ ಒಟ್ಟು 41,34,726 ಮಂದಿ ಮಹಿಳೆಯರು ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೆಚ್ಚ ₹8.83 ಕೋಟಿ ಆಗಿದೆ ಎಂದು ಅಂದಾಜಿಸಲಾಗಿದೆ.
ಮಹಿಳೆಯರ ಉಚಿತ ಪ್ರಯಾಣದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ.




Join Whatsapp