‘ರಾಜ್ಯದಲ್ಲಿ ಇರುವುದು ಜನಪಥ್ ಹಂಗಿನ ಸರ್ಕಾರವೇ?’: ಎಚ್.ಡಿ.ಕುಮಾರಸ್ವಾಮಿ

Prasthutha|

ಬೆಂಗಳೂರು: ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಮಂಗಳವಾರ ನಡೆಸಿದ ಬೆಂಗಳೂರಿನ ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿಯಾಗಿರುವುದು ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ.
ಈ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ‘ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೋ ಅಥವಾ ದಿಲ್ಲಿಯ ಜನಪಥ್ ರಸ್ತೆಯ 10ನೇ ನಂಬರ್ನ ಹಂಗಿನ ಸರ್ಕಾರವೋ’ ಎಂದು ಪ್ರಶ್ನಿಸಿದ್ದಾರೆ.
ಸುರ್ಜೇವಾಲಾ ಅವರು ನಡೆಸಿರುವ ಸಭೆ ಕುರಿತು ಟ್ವೀಟ್ ಮಾಡಿರುವ ಅವರು, ‘ಸುರ್ಜೇವಾಲಾ ಅವರಿಗೆ ಸರ್ಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು? ಮುಖ್ಯಮಂತ್ರಿ ಉತ್ತರಸಬೇಕು’ ಎಂದು ಒತ್ತಾಯಿಸಿದ್ದಾರೆ.
ಕನ್ನಡಿಗರು ಮತಹಾಕಿರುವುದು ‘ಕೈ’ ಸರ್ಕಾರಕ್ಕೂ ಅಥವಾ ‘ಕೈಗೊಂಬೆ’ ಸರ್ಕಾರಕ್ಕೋ? ಜನರ ವೋಟು ಹಂಗಿನ ಸರ್ಕಾರದ ಪಾಲಾಗಿದೆ ಎನ್ನುವುದು ಸರ್ಕಾರಕ್ಕೆ ತಿಂಗಳು ತುಂಬುವ ಮೊದಲೇ ಸಾಬೀತಾಗಿದೆ ಎಂದೂ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.



Join Whatsapp