ಇದು ಬಿಜೆಪಿಯ ಸೇಡಿನ ರಾಜಕಾರಣ: ಸಚಿವರ ಬಂಧನ ಕುರಿತು ಸಿಎಂ ಸ್ಟಾಲಿನ್ ಕಿಡಿ

Prasthutha|

ಚೆನ್ನೈ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನಕ್ಕೊಳಗಾದ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

- Advertisement -


ಇಡಿ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳಲ್ಲೇ ಭೇಟಿ ಮಾಡಿ ಆರೋಗ್ಯ ಸ್ಥಿತಿಗತಿಯನ್ನ ವೀಕ್ಷಿಸಿದ್ದಾರೆ. ಅಲ್ಲದೇ ಇದು ಬಿಜೆಪಿ ಸೇಡಿನ ರಾಜಕಾರಣ ಎಂದು ಕಿಡಿ ಕಾರಿದ್ದಾರೆ.
ಇಂದು (ಬುಧವಾರ) ಬೆಳಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸ್ಟಾಲಿನ್, ಸೆಂಥಿಲ್ ಅವರು ವಿಚಾರಣೆಗೆ ಸಹಕರಿಸಲು ಸಿದ್ಧರಿದ್ದರೂ, ಅವರನ್ನು ರಾತ್ರಿಪೂರ್ತಿ ಪ್ರಶ್ನಿಸಲಾಗಿದೆ. ಇ.ಡಿ ಅಧಿಕಾರಿಗಳು ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.


ರಾಜ್ಯದ ಜನರು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.




Join Whatsapp