‘ಡೇರ್ ಡೆವಿಲ್ ಮುಸ್ತಫಾ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

Prasthutha|

►ಕೋಮುಸಾಮರಸ್ಯ – ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾಗೆ ಸಿಎಂ ಪ್ರೋತ್ಸಾಹ

- Advertisement -

ಬೆಂಗಳೂರು: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.


ಚಿತ್ರದ ತಂಡವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ತೆರಿಗೆ ವಿನಾಯತಿಗೆ ಮನವಿ ಮಾಡಿತ್ತು. ಕೋಮುಸಾಮರಸ್ಯ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾವನ್ನು ಇನ್ನಷ್ಟು ಜನರು ಮತ್ತು ಶಾಲಾ ಮಕ್ಕಳು ನೋಡಲು ಸಹಕಾರಿಯಾಗುವಂತೆ ಮಾಡಲು ತೆರಿಗೆ ವಿನಾಯತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹಮತ ಸೂಚಿಸಿದ್ದಾರೆ.

- Advertisement -


ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್ ರಾಯ್ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್ ಶ್ಯಾಮ್ ಸಂಗೀತವಿದೆ.



Join Whatsapp