ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇಂದ್ರ ಸಚಿವ ಜ್ಯೋತಿಯಾಧಿತ್ಯ ಸಿಂಧಿಯಾ ಅವರ ಆಪ್ತ ಬೈಜನಾಥ್ ಸಿಂಗ್ ಯಾದವ್ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಶಿವಪುರಿ ಮೂಲದ ಯಾದವ್ ಮತ್ತು 15 ಜನಪದ ಸದಸ್ಯರು ಸೇರಿದಂತೆ ಅವರ ಬೆಂಬಲಿಗರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್ ಪಕ್ಷಕ್ಕೆ ಬರಮಾಡಿಕೊಂಡರು. ಯಾದವ್ ಸಿಂಧಿಯಾ ಅವರೊಂದಿಗೆ 2020 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಆದ್ದರಿಂದ ಯಾದವ್ ತಮ್ಮ ಮಾತೃ ಪಕ್ಷಕ್ಕೆ ಮರಳಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸುದ್ದಿಗಾರರಿಗೆ ತಿಳಿಸಿದರು.