ಜೂ. 20ರಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ

Prasthutha|

ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನಿಡಿದೆ.
ಜೂನ್ 20ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

- Advertisement -


ಈ ಬಗ್ಗೆ ಇಂದುಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊದಲು ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.



Join Whatsapp