ಕೇಂದ್ರದ ವಿರುದ್ಧ ಟೀಕೆ | ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ; ಕರವೇ ಆಕ್ರೋಶ

Prasthutha|

ಮಂಡ್ಯ : ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಸರಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ್ದಾರೆ ಎಂಬ ಆರೋಪದ ಮೇಲೆ ಖ್ಯಾತ ಸಾಹಿತಿ ಹಂ,ಪ.ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

- Advertisement -

ಜ.17ರಂದು ನಗರದಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ ಕೇಂದ್ರ ಸರಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು ಎನ್ನಲಾಗಿದೆ.

ಅವರ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದಲ್ಲಿ ಠಾಣೆಗೆ ಕರೆಸಿ ಅವರನ್ನು ವಿಚಾರಣೆ ನಡೆಸಲಾಗಿದೆ.

- Advertisement -

ಆಕ್ಷೇಪಾರ್ಹ ಹೇಳಿಕೆಗಳ ಯಾವುದೇ ದಾಖಲೆಗಳನ್ನು ದೂರುದಾರರು ಒದಗಿಸಿಲ್ಲ. ನಾಗರಾಜಯ್ಯ ಅವರ ಹೇಳಿಕೆ ಪಡೆದು ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಹಂಪನಾ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರು ಖಂಡಿಸಿದ್ದಾರೆ. ಆಳುವ ಸರಕಾರವನ್ನು ಟೀಕಿಸಿದರು ಎಂಬ ಕಾರಣಕ್ಕೆ ಕನ್ನಡಪರ ಹೆಸರಾಂತ ಸಾಹಿತಿ, ಸಂಶೋಧಕ ನಾಡೋಜ ಹಂಪನಾ ಅವರನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಅವಮಾನಿಸಲಾಗಿದೆ. ಇದನ್ನು ಮಾಡಿದವರದು ವಿಕೃತ ಮನಸ್ಥಿತಿ. ಕನ್ನಡಿಗರ ಪರಂಪರೆಯ ಮೇಲೆ ಮಾಡಿದ ಹಲ್ಲೆಯಿದು. ಈ ದುಷ್ಕೃತ್ಯಕ್ಕೆ ಯಾರು ಕಾರಣರೋ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp