PSI ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಡಿಬಾರ್

Prasthutha|

ಬೆಂಗಳೂರು: ರಾಜ್ಯ ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, 545 ಪಿಎಸ್ ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

- Advertisement -


ಈ ಕುರಿತು ಬುಧವಾರ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಈ ಆದೇಶ ಹೊರಡಿಸಿದ್ದಾರೆ.


2021 ಅಕ್ಟೋಬರ್ 3 ರಂದು ಪಿಎಸ್ ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.

- Advertisement -


ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.



Join Whatsapp