ಬೆಂಗಳೂರು: ಕೇಂದ್ರ ಸರ್ಕಾರವು ತನ್ನ ಬಳಿ ಅಕ್ಕಿ ಇಟ್ಟುಕೊಂಡೂ ಕೊಡದೆ ದ್ರೋಹ ಮಾಡಿದ್ದು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮವು ಹರಾಜಿನ ಮುಖೇನ ಅಕ್ಕಿ ಮಾರಾಟ ಮಾಡುತ್ತಿದೆ. ಈ ಹರಾಜಿನಲ್ಲಿ ಖಾಸಗಿಯವರು ಭಾಗಿಯಾಗಬಹುದು. ಆದರೆ ರಾಜ್ಯ ಸರ್ಕಾರಗಳು ಭಾಗಿಯಾಗುವಂತಿಲ್ಲ. ಹಾಗಾಗಿ ಹಣ ನೀಡಲು ತೀರ್ಮಾನಿಸಿದ್ದೇವೆ. ಆದರೂ ಮುಂದಿನ ದಿನಗಳಲ್ಲಿ ಅಕ್ಕಿ ಸಂಗ್ರಹಕ್ಕೆ ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಇಲ್ಲ ಎಂದಿದ್ದಾರೆ. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.