ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು ಮತ್ತು ಅದರಲ್ಲಿ ಕೆಲ ನ್ಯೂನತೆಗಳಿವೆ ಎಂದರು.
ಈ ಎಲ್ಲ ವಿಚಾರಗಳ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದರು.