ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜು.2ರ ರವಿವಾರ ರಾತ್ರಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು.
ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.