ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್. ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ , ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಅವರ ಮಾತುಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದರು.
ಯಡಿಯೂರಪ್ಪ ಅವರಿಗೆ ಒಳ್ಳೆಯದು ಆಗಲಿ ನಮ್ಮ ಗ್ಯಾರೆಂಟಿಯನ್ನು ಒಳ್ಳೆಯ ಪ್ರಚಾರ ಮಾಡ್ತಾ ಇದ್ದಾರೆ. ನಮ್ಮಿಂದ ತಪ್ಪಾಗಿದ್ರೆ ಸಲಹೆ ಕೊಡಲಿ ಸರಿ ಮಾಡಿಕೊಳ್ತೀವಿ ಯಡಿಯೂರಪ್ಪ ಅವರಿಗೆ ಜನ ರೆಸ್ಟ್ ಕೊಟ್ಟಿದ್ದಾರೆ. ಹೀಗಾಗಿ ಅವರು ರೆಸ್ಟ್ ತೆಗೆದುಕೊಳ್ಳಲಿ. ಸುಮ್ಮನೆ ಆರೋಪ ಮಾಡೋದು ಸರಿ ಇಲ್ಲ ಎಂದು ಗೇಲಿ ಮಾಡಿದರು